Matthew 13:23 in Kannada 23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ.” ಎಂದು ಹೇಳಿದನು.
Other Translations King James Version (KJV) But he that received seed into the good ground is he that heareth the word, and understandeth it; which also beareth fruit, and bringeth forth, some an hundredfold, some sixty, some thirty.
American Standard Version (ASV) And he that was sown upon the good ground, this is he that heareth the word, and understandeth it; who verily beareth fruit, and bringeth forth, some a hundredfold, some sixty, some thirty.
Bible in Basic English (BBE) And the seed which was put in good earth, this is he who gives ear to the word, and gets the sense of it; who gives fruit, some a hundred, some sixty, some thirty times as much.
Darby English Bible (DBY) But he that is sown upon the good ground -- this is he who hears and understands the word, who bears fruit also, and produces, one a hundred, one sixty, and one thirty.
World English Bible (WEB) What was sown on the good ground, this is he who hears the word, and understands it, who most assuredly bears fruit, and brings forth, some one hundred times as much, some sixty, and some thirty."
Young's Literal Translation (YLT) `And that sown on the good ground: this is he who is hearing the word, and is understanding, who indeed doth bear fruit, and doth make, some indeed a hundredfold, and some sixty, and some thirty.'
Cross Reference Psalm 1:1 in Kannada 1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
Psalm 92:13 in Kannada 13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
Proverbs 1:5 in Kannada 5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
Proverbs 2:2 in Kannada 2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
Ezekiel 18:31 in Kannada 31 “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನ ಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
Ezekiel 36:26 in Kannada 26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
Matthew 3:8 in Kannada 8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
Matthew 3:10 in Kannada 10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಅದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
Matthew 12:33 in Kannada 33 ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
Matthew 13:8 in Kannada 8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
Mark 4:20 in Kannada 20 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
Mark 10:15 in Kannada 15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
Luke 6:43 in Kannada 43 ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
Luke 8:15 in Kannada 15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
Luke 13:9 in Kannada 9 ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
John 1:11 in Kannada 11 ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.
John 8:47 in Kannada 47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.
John 10:26 in Kannada 26 ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.
John 15:1 in Kannada 1 “ನಾನೇ ನಿಜವಾದ ದ್ರಾಕ್ಷೆಬಳ್ಳಿ, ನನ್ನ ತಂದೆ ತೋಟಗಾರನು.
John 15:16 in Kannada 16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
John 17:7 in Kannada 7 ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
Acts 16:14 in Kannada 14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
Acts 17:11 in Kannada 11 ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
2 Corinthians 8:1 in Kannada 1 ಪ್ರಿಯರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,
2 Corinthians 9:10 in Kannada 10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
Galatians 5:22 in Kannada 22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
Philippians 1:11 in Kannada 11 ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
Philippians 4:17 in Kannada 17 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಖಾತೆಯನ್ನು ವರ್ಧಿಸುವಂಥ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸುತ್ತೇನೆ.
Colossians 1:6 in Kannada 6 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
Colossians 1:10 in Kannada 10 ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
1 Thessalonians 4:1 in Kannada 1 ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
2 Thessalonians 2:10 in Kannada 10 ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
2 Thessalonians 2:13 in Kannada 13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
Hebrews 4:2 in Kannada 2 ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Hebrews 6:7 in Kannada 7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
Hebrews 8:10 in Kannada 10 ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.
Hebrews 13:15 in Kannada 15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
James 1:21 in Kannada 21 ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
1 Peter 2:1 in Kannada 1 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
2 Peter 1:5 in Kannada 5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
2 Peter 3:18 in Kannada 18 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
1 John 5:20 in Kannada 20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.