Matthew 16:18 in Kannada 18 ನಾನು ಇದನ್ನು ಸಹ ನಿನಗೆ ಹೇಳುತ್ತೇನ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
Other Translations King James Version (KJV) And I say also unto thee, That thou art Peter, and upon this rock I will build my church; and the gates of hell shall not prevail against it.
American Standard Version (ASV) And I also say unto thee, that thou art Peter, and upon this rock I will build my church; and the gates of Hades shall not prevail against it.
Bible in Basic English (BBE) And I say to you that you are Peter, and on this rock will my church be based, and the doors of hell will not overcome it.
Darby English Bible (DBY) And *I* also, I say unto thee that *thou* art Peter, and on this rock I will build my assembly, and hades' gates shall not prevail against it.
World English Bible (WEB) I also tell you that you are Peter,{Peter's name, Petros in Greek, is the word for a specific rock or stone.} and on this rock{Greek, petra, a rock mass or bedrock.} I will build my assembly, and the gates of Hades will not prevail against it.
Young's Literal Translation (YLT) `And I also say to thee, that thou art a rock, and upon this rock I will build my assembly, and gates of Hades shall not prevail against it;
Cross Reference Genesis 22:17 in Kannada 17 ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಸ್ತ್ಯವಾಗಿ ಮಾಡಿಕೊಳ್ಳುವರು.
2 Samuel 18:4 in Kannada 4 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
Job 38:17 in Kannada 17 ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?
Psalm 9:13 in Kannada 13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
Psalm 69:12 in Kannada 12 ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
Psalm 107:18 in Kannada 18 ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
Psalm 125:1 in Kannada 1 ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
Psalm 127:5 in Kannada 5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
Proverbs 24:7 in Kannada 7 ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
Isaiah 28:6 in Kannada 6 ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
Isaiah 28:16 in Kannada 16 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
Isaiah 38:10 in Kannada 10 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ನಷ್ಟವಾದವು.
Isaiah 54:17 in Kannada 17 ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
Zechariah 6:12 in Kannada 12 ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.
Matthew 10:2 in Kannada 2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
Matthew 11:23 in Kannada 23 ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
Matthew 18:17 in Kannada 17 ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
John 1:42 in Kannada 42 ಅವನನ್ನು ಯೇಸುವಿನ ಬಳಿಗೆ ಕರದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
John 10:27 in Kannada 27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
Acts 2:47 in Kannada 47 ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
Acts 8:1 in Kannada 1 ಸೌಲನಿಗೆ ಅವನನ್ನು ಕೊಂದದ್ದು ಸಮ್ಮತವಾಯಿತು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೋಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
Romans 8:33 in Kannada 33 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
1 Corinthians 3:9 in Kannada 9 ನಾವು ದೇವರ ಜೊತೆಕೆಲಸದವರು. ನೀವು ದೇವರ ಕೃಷಿಗಳಾಗಿದ್ದೀರಿ. ದೇವರ ಮಂದಿರವೂ ಆಗಿದ್ದೀರಿ.
1 Corinthians 15:55 in Kannada 55 “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
Galatians 2:9 in Kannada 9 ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.
Ephesians 2:19 in Kannada 19 ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
Ephesians 3:10 in Kannada 10 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
Ephesians 5:25 in Kannada 25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
Ephesians 5:32 in Kannada 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
Colossians 1:18 in Kannada 18 ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
1 Timothy 3:5 in Kannada 5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
1 Timothy 3:15 in Kannada 15 ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
Hebrews 3:3 in Kannada 3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
Hebrews 12:28 in Kannada 28 ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
Revelation 11:15 in Kannada 15 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
Revelation 21:1 in Kannada 1 ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
Revelation 21:14 in Kannada 14 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.