Matthew 17:5 in Kannada 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
Other Translations King James Version (KJV) While he yet spake, behold, a bright cloud overshadowed them: and behold a voice out of the cloud, which said, This is my beloved Son, in whom I am well pleased; hear ye him.
American Standard Version (ASV) While he was yet speaking, behold, a bright cloud overshadowed them: and behold, a voice out of the cloud, saying, This is my beloved Son, in whom I am well pleased; hear ye him.
Bible in Basic English (BBE) While he was still talking, a bright cloud came over them: and a voice out of the cloud, saying, This is my dearly loved Son, with whom I am well pleased; give ear to him.
Darby English Bible (DBY) While he was still speaking, behold, a bright cloud overshadowed them, and lo, a voice out of the cloud, saying, *This* is my beloved Son, in whom I have found my delight: hear him.
World English Bible (WEB) While he was still speaking, behold, a bright cloud overshadowed them. Behold, a voice came out of the cloud, saying, "This is my beloved Son, in whom I am well pleased. Listen to him."
Young's Literal Translation (YLT) While he is yet speaking, lo, a bright cloud overshadowed them, and lo, a voice out of the cloud, saying, `This is My Son, -- the Beloved, in whom I did delight; hear him.'
Cross Reference Exodus 19:19 in Kannada 19 ತುತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
Exodus 40:34 in Kannada 34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
Deuteronomy 4:11 in Kannada 11 ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.
Deuteronomy 5:22 in Kannada 22 ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
Deuteronomy 18:15 in Kannada 15 ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.
Deuteronomy 18:19 in Kannada 19 ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.
1 Kings 8:10 in Kannada 10 ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
Job 38:1 in Kannada 1 ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
Psalm 18:10 in Kannada 10 ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
Psalm 81:7 in Kannada 7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.
Isaiah 42:1 in Kannada 1 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
Isaiah 42:21 in Kannada 21 ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
Matthew 3:17 in Kannada 17 ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
Matthew 12:18 in Kannada 18 “ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
Mark 1:11 in Kannada 11 ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
Mark 9:7 in Kannada 7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
Luke 3:22 in Kannada 22 ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
Luke 9:34 in Kannada 34 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
John 3:16 in Kannada 16 “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
John 3:35 in Kannada 35 ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
John 5:20 in Kannada 20 ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
John 5:37 in Kannada 37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
John 12:28 in Kannada 28 ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
John 15:9 in Kannada 9 “ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
Acts 1:9 in Kannada 9 ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
Acts 3:22 in Kannada 22 ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
Acts 7:37 in Kannada 37 ಆ ಮೋಶೆಯೇ, “ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು” ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
Acts 9:3 in Kannada 3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.
Ephesians 1:6 in Kannada 6 ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
Colossians 1:13 in Kannada 13 ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
Hebrews 1:1 in Kannada 1 ದೇವರು ಪುರಾತನ ಕಾಲದಲ್ಲಿ ನಮ್ಮ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.
Hebrews 2:1 in Kannada 1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
Hebrews 5:9 in Kannada 9 ಇದಲ್ಲದೆ ಆತನು ಪರಿಪೂರ್ಣಗೊಳಿಸಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
Hebrews 12:25 in Kannada 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
2 Peter 1:16 in Kannada 16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
Revelation 1:7 in Kannada 7 ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.