Matthew 18:10 in Kannada 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Other Translations King James Version (KJV) Take heed that ye despise not one of these little ones; for I say unto you, That in heaven their angels do always behold the face of my Father which is in heaven.
American Standard Version (ASV) See that ye despise not one of these little ones; for I say unto you, that in heaven their angels do always behold the face of my Father who is in heaven.
Bible in Basic English (BBE) Let it not seem to you that one of these little ones is of no value; for I say to you that in heaven their angels see at all times the face of my Father in heaven.
Darby English Bible (DBY) See that ye do not despise one of these little ones; for I say unto you that their angels in [the] heavens continually behold the face of my Father who is in [the] heavens.
World English Bible (WEB) See that you don't despise one of these little ones, for I tell you that in heaven their angels always see the face of my Father who is in heaven.
Young's Literal Translation (YLT) `Beware! -- ye may not despise one of these little ones, for I say to you, that their messengers in the heavens do always behold the face of my Father who is in the heavens,
Cross Reference Genesis 32:1 in Kannada 1 ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
2 Samuel 14:28 in Kannada 28 ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರುಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
1 Kings 22:19 in Kannada 19 ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
2 Kings 6:16 in Kannada 16 ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,
Esther 1:14 in Kannada 14 ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
Psalm 15:4 in Kannada 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
Psalm 17:15 in Kannada 15 ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
Psalm 34:7 in Kannada 7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
Psalm 91:11 in Kannada 11 ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
Zechariah 4:10 in Kannada 10 ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಿದವರು ಯಾರು?
Zechariah 13:7 in Kannada 7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
Matthew 1:20 in Kannada 20 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
Matthew 2:13 in Kannada 13 ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.
Matthew 2:19 in Kannada 19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
Matthew 12:20 in Kannada 20 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
Matthew 18:6 in Kannada 6 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
Matthew 18:14 in Kannada 14 ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
Matthew 24:31 in Kannada 31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
Luke 1:19 in Kannada 19 ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
Luke 10:16 in Kannada 16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
Luke 16:22 in Kannada 22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
Acts 5:19 in Kannada 19 ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
Acts 10:3 in Kannada 3 ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Acts 12:7 in Kannada 7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
Acts 12:15 in Kannada 15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
Acts 12:23 in Kannada 23 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
Acts 27:23 in Kannada 23 ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
Romans 14:1 in Kannada 1 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ತೀರ್ಪುಮಾಡಬೇಡಿರಿ.
Romans 14:10 in Kannada 10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
Romans 14:13 in Kannada 13 ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
Romans 14:21 in Kannada 21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.
Romans 15:1 in Kannada 1 ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
1 Corinthians 8:8 in Kannada 8 ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
1 Corinthians 9:22 in Kannada 22 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
1 Corinthians 11:22 in Kannada 22 ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.
1 Corinthians 16:11 in Kannada 11 ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
2 Corinthians 10:1 in Kannada 1 ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,
2 Corinthians 10:10 in Kannada 10 “ಅವನಿಂದ ಬಂದ ಪತ್ರಿಕೆಗಳು ಕಟೋರವಾದವುಗಳೂ, ಬಲವುಳ್ಳವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
Galatians 4:13 in Kannada 13 ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Galatians 6:1 in Kannada 1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
1 Thessalonians 4:8 in Kannada 8 ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.
1 Timothy 4:12 in Kannada 12 ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
Hebrews 1:14 in Kannada 14 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
Revelation 8:2 in Kannada 2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.