Matthew 18:7 in Kannada 7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Other Translations King James Version (KJV) Woe unto the world because of offences! for it must needs be that offences come; but woe to that man by whom the offence cometh!
American Standard Version (ASV) Woe unto the world because of occasions of stumbling! for it must needs be that the occasions come; but woe to that man through whom the occasion cometh!
Bible in Basic English (BBE) A curse is on the earth because of trouble! for it is necessary for trouble to come; but unhappy is that man through whom the trouble comes.
Darby English Bible (DBY) Woe to the world because of offences! For it must needs be that offences come; yet woe to that man by whom the offence comes!
World English Bible (WEB) "Woe to the world because of occasions of stumbling! For it must be that the occasions come, but woe to that person through whom the occasion comes!
Young's Literal Translation (YLT) `Wo to the world from the stumbling-blocks! for there is a necessity for the stumbling-blocks to come, but wo to that man through whom the stumbling-block doth come!
Cross Reference Genesis 13:7 in Kannada 7 ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
1 Samuel 2:17 in Kannada 17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.
1 Samuel 2:22 in Kannada 22 ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ
2 Samuel 12:14 in Kannada 14 ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
Matthew 13:41 in Kannada 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
Matthew 23:13 in Kannada 13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Matthew 26:24 in Kannada 24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನಿಗೆ ಆಯ್ಯೋ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
Mark 13:7 in Kannada 7 ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳ ಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Luke 17:1 in Kannada 1 ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
John 17:12 in Kannada 12 ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ಆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
Acts 1:16 in Kannada 16 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
Acts 1:18 in Kannada 18 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
Romans 2:23 in Kannada 23 ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?
1 Corinthians 11:19 in Kannada 19 ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
2 Thessalonians 2:3 in Kannada 3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
1 Timothy 4:1 in Kannada 1 ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
1 Timothy 5:14 in Kannada 14 ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
1 Timothy 6:1 in Kannada 1 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.
2 Timothy 3:1 in Kannada 1 ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
2 Timothy 4:3 in Kannada 3 ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
Titus 2:5 in Kannada 5 ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
Titus 2:8 in Kannada 8 ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
2 Peter 2:2 in Kannada 2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
2 Peter 2:15 in Kannada 15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
Jude 1:4 in Kannada 4 ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
Jude 1:11 in Kannada 11 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
Revelation 2:14 in Kannada 14 ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
Revelation 2:20 in Kannada 20 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.
Revelation 19:20 in Kannada 20 ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.