Matthew 19:21 in Kannada 21 ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Other Translations King James Version (KJV) Jesus said unto him, If thou wilt be perfect, go and sell that thou hast, and give to the poor, and thou shalt have treasure in heaven: and come and follow me.
American Standard Version (ASV) Jesus said unto him, If thou wouldest be perfect, go, sell that which thou hast, and give to the poor, and thou shalt have treasure in heaven: and come, follow me.
Bible in Basic English (BBE) Jesus said to him, If you have a desire to be complete, go, get money for your property, and give it to the poor, and you will have wealth in heaven: and come after me.
Darby English Bible (DBY) Jesus said to him, If thou wouldest be perfect, go, sell what thou hast and give to [the] poor, and thou shalt have treasure in heaven; and come, follow me.
World English Bible (WEB) Jesus said to him, "If you want to be perfect, go, sell what you have, and give to the poor, and you will have treasure in heaven; and come, follow me."
Young's Literal Translation (YLT) Jesus said to him, `If thou dost will to be perfect, go away, sell what thou hast, and give to the poor, and thou shalt have treasure in heaven, and come, follow me.'
Cross Reference Genesis 6:9 in Kannada 9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
Genesis 17:1 in Kannada 1 ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
Job 1:1 in Kannada 1 ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
Psalm 37:37 in Kannada 37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
Matthew 4:19 in Kannada 19 ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
Matthew 5:19 in Kannada 19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
Matthew 5:48 in Kannada 48 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
Matthew 6:19 in Kannada 19 “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
Matthew 9:9 in Kannada 9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
Matthew 16:24 in Kannada 24 ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Matthew 19:28 in Kannada 28 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Mark 2:14 in Kannada 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Mark 8:34 in Kannada 34 ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Mark 10:21 in Kannada 21 ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Luke 5:27 in Kannada 27 ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
Luke 6:40 in Kannada 40 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
Luke 9:23 in Kannada 23 ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Luke 12:33 in Kannada 33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
Luke 14:33 in Kannada 33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
Luke 16:9 in Kannada 9 ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
Luke 18:22 in Kannada 22 ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
John 10:27 in Kannada 27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
John 12:26 in Kannada 26 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
Acts 2:45 in Kannada 45 ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
Acts 4:32 in Kannada 32 ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
Philippians 3:12 in Kannada 12 ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.
1 Timothy 6:17 in Kannada 17 ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
Hebrews 10:34 in Kannada 34 ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.