Matthew 2:2 in Kannada 2 “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
Other Translations King James Version (KJV) Saying, Where is he that is born King of the Jews? for we have seen his star in the east, and are come to worship him.
American Standard Version (ASV) Where is he that is born King of the Jews? for we saw his star in the east, and are come to worship him.
Bible in Basic English (BBE) Saying, Where is the King of the Jews whose birth has now taken place? We have seen his star in the east and have come to give him worship.
Darby English Bible (DBY) Where is the king of the Jews that has been born? for we have seen his star in the east, and have come to do him homage.
World English Bible (WEB) "Where is he who is born King of the Jews? For we saw his star in the east, and have come to worship him."
Young's Literal Translation (YLT) saying, `Where is he who was born king of the Jews? for we saw his star in the east, and we came to bow to him.'
Cross Reference Numbers 24:17 in Kannada 17 ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 45:11 in Kannada 11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
Isaiah 9:6 in Kannada 6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
Isaiah 32:1 in Kannada 1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
Isaiah 60:3 in Kannada 3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
Jeremiah 23:5 in Kannada 5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
Jeremiah 30:9 in Kannada 9 ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
Zechariah 9:9 in Kannada 9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
Matthew 2:10 in Kannada 10 ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.
Matthew 21:5 in Kannada 5 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
Matthew 27:11 in Kannada 11 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
Luke 2:11 in Kannada 11 ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
Luke 19:38 in Kannada 38 “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
Luke 23:3 in Kannada 3 ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.
Luke 23:38 in Kannada 38 ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
John 1:49 in Kannada 49 ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
John 5:23 in Kannada 23 ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
John 9:38 in Kannada 38 ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
John 12:13 in Kannada 13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
John 18:37 in Kannada 37 ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
John 19:12 in Kannada 12 ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
John 19:19 in Kannada 19 ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
John 20:28 in Kannada 28 ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
Hebrews 1:6 in Kannada 6 ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
Revelation 22:16 in Kannada 16 “ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”