Matthew 20:19 in Kannada 19 ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
Other Translations King James Version (KJV) And shall deliver him to the Gentiles to mock, and to scourge, and to crucify him: and the third day he shall rise again.
American Standard Version (ASV) and shall deliver him unto the Gentiles to mock, and to scourge, and to crucify: and the third day he shall be raised up.
Bible in Basic English (BBE) And will give him up to the Gentiles to be made sport of and to be whipped and to be put to death on the cross: and the third day he will come back again from the dead.
Darby English Bible (DBY) and they will deliver him up to the nations to mock and to scourge and to crucify, and the third day he shall rise again.
World English Bible (WEB) and will hand him over to the Gentiles to mock, to scourge, and to crucify; and the third day he will be raised up."
Young's Literal Translation (YLT) and they shall condemn him to death, and shall deliver him to the nations to mock, and to scourge, and to crucify, and the third day he will rise again.'
Cross Reference Psalm 22:7 in Kannada 7 ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
Psalm 35:16 in Kannada 16 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.
Isaiah 26:19 in Kannada 19 ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗುಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
Isaiah 53:3 in Kannada 3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
Hosea 6:2 in Kannada 2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
Matthew 12:40 in Kannada 40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
Matthew 16:21 in Kannada 21 ಅಂದಿನಿಂದ ಯೇಸು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
Matthew 26:67 in Kannada 67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
Matthew 27:2 in Kannada 2 ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪೋನಥ್ಯ ಪಿಲಾತನಿಗೆ ಒಪ್ಪಿಸಿದರು.
Matthew 27:27 in Kannada 27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
Mark 14:65 in Kannada 65 ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
Mark 15:1 in Kannada 1 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
Mark 15:16 in Kannada 16 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.
Luke 23:1 in Kannada 1 ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
Luke 23:11 in Kannada 11 ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
Luke 24:46 in Kannada 46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,
John 18:28 in Kannada 28 ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
John 19:1 in Kannada 1 ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.
Acts 2:23 in Kannada 23 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆಜಡಿದು ಕೊಂದಿರಿ.
Acts 3:13 in Kannada 13 ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
Acts 4:27 in Kannada 27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
Acts 21:11 in Kannada 11 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
1 Corinthians 15:3 in Kannada 3 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;