Matthew 21:41 in Kannada 41 ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
Other Translations King James Version (KJV) They say unto him, He will miserably destroy those wicked men, and will let out his vineyard unto other husbandmen, which shall render him the fruits in their seasons.
American Standard Version (ASV) They say unto him, He will miserably destroy those miserable men, and will let out the vineyard unto other husbandmen, who shall render him the fruits in their seasons.
Bible in Basic English (BBE) They say to him, He will put those cruel men to a cruel death, and will let out the vine-garden to other workmen, who will give him the fruit when it is ready.
Darby English Bible (DBY) They say to him, He will miserably destroy those evil [men], and let out the vineyard to other husbandmen, who shall render him the fruits in their seasons.
World English Bible (WEB) They told him, "He will miserably destroy those miserable men, and will lease out the vineyard to other farmers, who will give him the fruit in its season."
Young's Literal Translation (YLT) They say to him, `Evil men -- he will evilly destroy them, and the vineyard will give out to other husbandmen, who will give back to him the fruits in their seasons.'
Cross Reference Leviticus 26:14 in Kannada 14 “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
Deuteronomy 28:59 in Kannada 59 ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.
Psalm 2:4 in Kannada 4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
Psalm 2:9 in Kannada 9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
Isaiah 5:5 in Kannada 5 ನನ್ನ ದ್ರಾಕ್ಷೆಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
Isaiah 49:5 in Kannada 5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
Isaiah 65:15 in Kannada 15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
Isaiah 66:19 in Kannada 19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
Daniel 9:26 in Kannada 26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
Zechariah 11:8 in Kannada 8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.
Zechariah 12:12 in Kannada 12 ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
Zechariah 13:8 in Kannada 8 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
Zechariah 14:2 in Kannada 2 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
Malachi 4:1 in Kannada 1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
Matthew 3:12 in Kannada 12 ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
Matthew 8:11 in Kannada 11 ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
Matthew 21:43 in Kannada 43 ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
Matthew 22:6 in Kannada 6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
Matthew 23:35 in Kannada 35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
Matthew 24:21 in Kannada 21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
Luke 13:28 in Kannada 28 ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
Luke 14:23 in Kannada 23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
Luke 17:32 in Kannada 32 ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
Luke 19:41 in Kannada 41 ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
Luke 21:22 in Kannada 22 ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
Acts 13:46 in Kannada 46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
Acts 15:7 in Kannada 7 “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
Acts 18:6 in Kannada 6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,
Acts 28:8 in Kannada 8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
Acts 28:28 in Kannada 28 “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
Romans 9:1 in Kannada 1 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸಾಕ್ಷಿಯೇ ಇದಕ್ಕೆ ಸಾಕ್ಷಿ.
Romans 15:9 in Kannada 9 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
1 Thessalonians 2:16 in Kannada 16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
Hebrews 2:3 in Kannada 3 ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
Hebrews 12:25 in Kannada 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?