Matthew 22:16 in Kannada 16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
Other Translations King James Version (KJV) And they sent out unto him their disciples with the Herodians, saying, Master, we know that thou art true, and teachest the way of God in truth, neither carest thou for any man: for thou regardest not the person of men.
American Standard Version (ASV) And they send to him their disciples, with the Herodians, saying, Teacher, we know that thou art true, and teachest the way of God in truth, and carest not for any one: for thou regardest not the person of men.
Bible in Basic English (BBE) And they sent to him their disciples, with the Herodians, saying, Master, we see that you are true, and that you are teaching the true way of God, and have no fear of anyone, because you have no respect for a man's position.
Darby English Bible (DBY) And they send out to him their disciples with the Herodians, saying, Teacher, we know that thou art true and teachest the way of God in truth, and carest not for any one, for thou regardest not men's person;
World English Bible (WEB) They sent their disciples to him, along with the Herodians, saying, "Teacher, we know that you are honest, and teach the way of God in truth, no matter who you teach, for you aren't partial to anyone.
Young's Literal Translation (YLT) and they send to him their disciples with the Herodians, saying, `Teacher, we have known that thou art true, and the way of God in truth thou dost teach, and thou art not caring for any one, for thou dost not look to the face of men;
Cross Reference Deuteronomy 33:9 in Kannada 9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
1 Kings 22:14 in Kannada 14 ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
Job 32:21 in Kannada 21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.
Psalm 5:9 in Kannada 9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
Psalm 12:2 in Kannada 2 ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
Psalm 55:21 in Kannada 21 ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
Proverbs 29:5 in Kannada 5 ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.
Isaiah 59:13 in Kannada 13 ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
Jeremiah 9:3 in Kannada 3 ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
Ezekiel 33:30 in Kannada 30 ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
Micah 3:9 in Kannada 9 ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,
Malachi 2:6 in Kannada 6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
Malachi 2:9 in Kannada 9 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
Matthew 16:11 in Kannada 11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
Matthew 22:24 in Kannada 24 ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
Matthew 22:26 in Kannada 26 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
Matthew 26:18 in Kannada 18 ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.
Matthew 26:49 in Kannada 49 ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
Mark 3:6 in Kannada 6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
Mark 8:15 in Kannada 15 ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
Mark 10:17 in Kannada 17 ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.
Mark 12:14 in Kannada 14 ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
Luke 7:40 in Kannada 40 ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.
Luke 20:21 in Kannada 21 ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
John 7:18 in Kannada 18 ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
John 14:6 in Kannada 6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
John 18:37 in Kannada 37 ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
2 Corinthians 2:17 in Kannada 17 ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
2 Corinthians 4:2 in Kannada 2 ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
2 Corinthians 5:16 in Kannada 16 ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಕೇವಲ ರಕ್ತಸಂಬಂಧದಿಂದ ಪರಿಚಯ ಮಾಡಿಕೊಳ್ಳುವುದಿಲ್ಲ. ಒಮ್ಮೆ ಕ್ರಿಸ್ತನನ್ನು ಸಹಾ ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಯಾರನ್ನು ಆ ರೀತಿಯಾಗಿ ಪರಿಗಣಿಸುವುದಿಲ್ಲ.
Galatians 1:10 in Kannada 10 ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
Galatians 2:6 in Kannada 6 ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
1 Thessalonians 2:4 in Kannada 4 ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
James 3:17 in Kannada 17 ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ವಿಧೇಯತೆಯಿಂದ ಕೂಡಿದ್ದಾಗಿದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಎಂದು ಸಂತೋಷವಾಗಿ ಒಪ್ಪಿಕೊಳ್ಳುವಂತದ್ದು ಆಗಿದೆ.
1 John 5:20 in Kannada 20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.