Matthew 23:34 in Kannada 34 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
Other Translations King James Version (KJV) Wherefore, behold, I send unto you prophets, and wise men, and scribes: and some of them ye shall kill and crucify; and some of them shall ye scourge in your synagogues, and persecute them from city to city:
American Standard Version (ASV) Therefore, behold, I send unto you prophets, and wise men, and scribes: some of them shall ye kill and crucify; and some of them shall ye scourge in your synagogues, and persecute from city to city:
Bible in Basic English (BBE) For this reason, I send you prophets, and wise men, and scribes: some of them you will put to death and put on the cross, and to some of them you will give blows in your Synagogues, driving them from town to town;
Darby English Bible (DBY) Therefore, behold, *I* send unto you prophets, and wise men, and scribes; and [some] of them ye will kill and crucify, and [some] of them ye will scourge in your synagogues, and will persecute from city to city;
World English Bible (WEB) Therefore, behold, I send to you prophets, wise men, and scribes. Some of them you will kill and crucify; and some of them you will scourge in your synagogues, and persecute from city to city;
Young's Literal Translation (YLT) `Because of this, lo, I send to you prophets, and wise men, and scribes, and of them ye will kill and crucify, and of them ye will scourge in your synagogues, and will pursue from city to city;
Cross Reference 2 Chronicles 36:15 in Kannada 15 ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
Proverbs 11:30 in Kannada 30 ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
Matthew 10:16 in Kannada 16 “ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
Matthew 10:23 in Kannada 23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 13:52 in Kannada 52 ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
Matthew 23:34 in Kannada 34 ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
Matthew 28:19 in Kannada 19 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
Luke 11:49 in Kannada 49 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
Luke 24:47 in Kannada 47 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
John 16:2 in Kannada 2 ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
John 20:21 in Kannada 21 ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
Acts 1:8 in Kannada 8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
Acts 5:40 in Kannada 40 ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
Acts 7:51 in Kannada 51 “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
Acts 7:58 in Kannada 58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
Acts 9:1 in Kannada 1 ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಸೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ;
Acts 11:27 in Kannada 27 ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
Acts 12:2 in Kannada 2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
Acts 13:1 in Kannada 1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಹೆರೋದನ ರಾಜ್ಯದ ಕಾಲುಭಾಗಕ್ಕೆ ರಾಜನಾದ ಹೆರೋದ ಅಂತಿಪನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
Acts 14:19 in Kannada 19 ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
Acts 15:32 in Kannada 32 ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
Acts 22:19 in Kannada 19 “ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
1 Corinthians 2:6 in Kannada 6 ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
1 Corinthians 3:10 in Kannada 10 ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
1 Corinthians 12:3 in Kannada 3 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
2 Corinthians 11:24 in Kannada 24 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.
Ephesians 4:8 in Kannada 8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
Colossians 1:28 in Kannada 28 ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
1 Thessalonians 2:16 in Kannada 16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
Hebrews 11:37 in Kannada 37 ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
Revelation 11:10 in Kannada 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.