Matthew 23:37 in Kannada 37 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
Other Translations King James Version (KJV) O Jerusalem, Jerusalem, thou that killest the prophets, and stonest them which are sent unto thee, how often would I have gathered thy children together, even as a hen gathereth her chickens under her wings, and ye would not!
American Standard Version (ASV) O Jerusalem, Jerusalem, that killeth the prophets, and stoneth them that are sent unto her! how often would I have gathered thy children together, even as a hen gathereth her chickens under her wings, and ye would not!
Bible in Basic English (BBE) O Jerusalem, Jerusalem, putting to death the prophets, and stoning those who are sent to her! Again and again would I have taken your children to myself as a bird takes her young ones under her wings, and you would not!
Darby English Bible (DBY) Jerusalem, Jerusalem, [the city] that kills the prophets and stones those that are sent unto her, how often would I have gathered thy children as a hen gathers her chickens under her wings, and ye would not!
World English Bible (WEB) "Jerusalem, Jerusalem, who kills the prophets, and stones those who are sent to her! How often would I have gathered your children together, even as a hen gathers her chickens under her wings, and you would not!
Young's Literal Translation (YLT) `Jerusalem, Jerusalem, that art killing the prophets, and stoning those sent unto thee, how often did I will to gather thy children together, as a hen doth gather her own chickens under the wings, and ye did not will.
Cross Reference Deuteronomy 32:11 in Kannada 11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
Ruth 2:12 in Kannada 12 ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
2 Chronicles 24:21 in Kannada 21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
2 Chronicles 36:15 in Kannada 15 ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
Nehemiah 9:26 in Kannada 26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
Psalm 17:8 in Kannada 8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
Psalm 36:7 in Kannada 7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
Psalm 57:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
Psalm 63:7 in Kannada 7 ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.
Psalm 81:8 in Kannada 8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
Psalm 91:4 in Kannada 4 ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
Proverbs 1:24 in Kannada 24 ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
Isaiah 50:2 in Kannada 2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವುವು.
Jeremiah 2:30 in Kannada 30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
Jeremiah 4:14 in Kannada 14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
Jeremiah 6:8 in Kannada 8 ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
Jeremiah 6:16 in Kannada 16 ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
Jeremiah 11:7 in Kannada 7 ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
Jeremiah 25:3 in Kannada 3 ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
Jeremiah 26:23 in Kannada 23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Jeremiah 35:15 in Kannada 15 ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Jeremiah 42:9 in Kannada 9 “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
Jeremiah 44:4 in Kannada 4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
Hosea 11:2 in Kannada 2 ಪ್ರವಾದಿಗಳು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
Hosea 11:7 in Kannada 7 ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
Zechariah 1:4 in Kannada 4 ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
Matthew 5:12 in Kannada 12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
Matthew 21:35 in Kannada 35 ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.
Matthew 22:3 in Kannada 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
Matthew 22:6 in Kannada 6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
Matthew 23:30 in Kannada 30 ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
Mark 12:3 in Kannada 3 ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Luke 13:34 in Kannada 34 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
Luke 14:17 in Kannada 17 ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
Luke 15:28 in Kannada 28 ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.
Luke 19:14 in Kannada 14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
Luke 20:11 in Kannada 11 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Acts 7:51 in Kannada 51 “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
1 Thessalonians 2:15 in Kannada 15 ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
Revelation 11:7 in Kannada 7 ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.
Revelation 17:6 in Kannada 6 ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.