Matthew 24:31 in Kannada 31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
Other Translations King James Version (KJV) And he shall send his angels with a great sound of a trumpet, and they shall gather together his elect from the four winds, from one end of heaven to the other.
American Standard Version (ASV) And he shall send forth his angels with a great sound of a trumpet, and they shall gather together his elect from the four winds, from one end of heaven to the other.
Bible in Basic English (BBE) And he will send out his angels with a great sound of a horn, and they will get his saints together from the four winds, from one end of heaven to the other.
Darby English Bible (DBY) And he shall send his angels with a great sound of trumpet, and they shall gather together his elect from the four winds, from [the one] extremity of [the] heavens to [the other] extremity of them.
World English Bible (WEB) He will send out his angels with a great sound of a trumpet, and they will gather together his chosen ones from the four winds, from one end of the sky to the other.
Young's Literal Translation (YLT) and he shall send his messengers with a great sound of a trumpet, and they shall gather together his chosen from the four winds, from the ends of the heavens unto the ends thereof.
Cross Reference Numbers 10:1 in Kannada 1 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
Deuteronomy 30:4 in Kannada 4 ನಿಮ್ಮಲ್ಲಿ ಯಾರಾದರೂ ಭೂಲೋಕದ ಕೊನೆಯ ವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.
Psalm 22:27 in Kannada 27 ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
Psalm 67:7 in Kannada 7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
Psalm 81:3 in Kannada 3 ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
Isaiah 11:12 in Kannada 12 ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
Isaiah 13:5 in Kannada 5 ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
Isaiah 27:13 in Kannada 13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.
Isaiah 42:10 in Kannada 10 ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
Isaiah 43:6 in Kannada 6 ‘ಅವರನ್ನು ಒಪ್ಪಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
Isaiah 45:22 in Kannada 22 ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
Isaiah 49:18 in Kannada 18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.
Isaiah 60:4 in Kannada 4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕಳಿನಲ್ಲಿ ಕುಳಿತು ಬರುತ್ತಾರೆ.
Daniel 7:2 in Kannada 2 ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
Zechariah 2:6 in Kannada 6 ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
Zechariah 9:10 in Kannada 10 ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಯೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.
Zechariah 9:14 in Kannada 14 ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.
Zechariah 14:5 in Kannada 5 ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಗೆ ಓಡಿಹೋಗುವಿರಿ; ಏಕೆಂದರೆ ಆ ಡೊಂಗರವು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
Matthew 13:41 in Kannada 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
Matthew 24:22 in Kannada 22 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬನಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
Matthew 25:31 in Kannada 31 “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
Matthew 28:18 in Kannada 18 ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
Mark 13:27 in Kannada 27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
Mark 16:15 in Kannada 15 ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
Luke 24:47 in Kannada 47 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
John 11:52 in Kannada 52 ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುವುದಾಗಿ ಪ್ರವಾದಿಸಿದನು
Acts 26:19 in Kannada 19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
Romans 10:18 in Kannada 18 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
1 Corinthians 15:52 in Kannada 52 ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
Ephesians 1:10 in Kannada 10 ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
1 Thessalonians 4:16 in Kannada 16 ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.
2 Thessalonians 2:1 in Kannada 1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
Revelation 1:20 in Kannada 20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”
Revelation 7:1 in Kannada 1 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.
Revelation 8:2 in Kannada 2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.
Revelation 11:15 in Kannada 15 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
Revelation 14:6 in Kannada 6 ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.