Matthew 24:6 in Kannada 6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Other Translations King James Version (KJV) And ye shall hear of wars and rumours of wars: see that ye be not troubled: for all these things must come to pass, but the end is not yet.
American Standard Version (ASV) And ye shall hear of wars and rumors of wars; see that ye be not troubled: for `these things' must needs come to pass; but the end is not yet.
Bible in Basic English (BBE) And news will come to you of wars and talk of wars: do not be troubled, for these things have to be; but it is still not the end.
Darby English Bible (DBY) But ye will hear of wars and rumours of wars. See that ye be not disturbed; for all [these things] must take place, but it is not yet the end.
World English Bible (WEB) You will hear of wars and rumors of wars. See that you aren't troubled, for all this must happen, but the end is not yet.
Young's Literal Translation (YLT) and ye shall begin to hear of wars, and reports of wars; see, be not troubled, for it behoveth all `these' to come to pass, but the end is not yet.
Cross Reference Psalm 27:1 in Kannada 1 ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?
Psalm 46:1 in Kannada 1 1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
Psalm 112:7 in Kannada 7 ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
Isaiah 8:12 in Kannada 12 “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
Isaiah 12:2 in Kannada 2 ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
Isaiah 26:3 in Kannada 3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
Isaiah 26:20 in Kannada 20 ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
Jeremiah 4:19 in Kannada 19 ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
Jeremiah 6:22 in Kannada 22 “ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
Jeremiah 8:15 in Kannada 15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
Jeremiah 47:6 in Kannada 6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
Ezekiel 7:24 in Kannada 24 ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
Ezekiel 14:17 in Kannada 17 “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
Ezekiel 21:9 in Kannada 9 “ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!
Ezekiel 21:28 in Kannada 28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
Daniel 9:24 in Kannada 24 ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
Daniel 11:1 in Kannada 1 ಮೇದ್ಯನಾದ ದಾರ್ಯಾವೇಷನ ಆಳ್ವಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.
Habakkuk 3:16 in Kannada 16 ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೇನು.
Matthew 24:14 in Kannada 14 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
Matthew 26:54 in Kannada 54 ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ? ಎಂದು ಹೇಳಿದನು.
Mark 13:7 in Kannada 7 ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳ ಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Luke 21:9 in Kannada 9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.
Luke 21:19 in Kannada 19 ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
Luke 22:37 in Kannada 37 ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
John 14:1 in Kannada 1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
John 14:27 in Kannada 27 “ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
Acts 27:24 in Kannada 24 ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
2 Thessalonians 2:2 in Kannada 2 ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
1 Peter 3:14 in Kannada 14 ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.