Matthew 25:1 in Kannada 1 “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
Other Translations King James Version (KJV) Then shall the kingdom of heaven be likened unto ten virgins, which took their lamps, and went forth to meet the bridegroom.
American Standard Version (ASV) Then shall the kingdom of heaven be likened unto ten virgins, who took their lamps, and went forth to meet the bridegroom.
Bible in Basic English (BBE) Then the kingdom of heaven will be like ten virgins, the friends of the bride, who took their lights, and went out with the purpose of meeting the husband.
Darby English Bible (DBY) Then shall the kingdom of the heavens be made like to ten virgins that having taken their torches, went forth to meet the bridegroom.
World English Bible (WEB) "Then the Kingdom of Heaven will be like ten virgins, who took their lamps, and went out to meet the bridegroom.
Young's Literal Translation (YLT) `Then shall the reign of the heavens be likened to ten virgins, who, having taken their lamps, went forth to meet the bridegroom;
Cross Reference Psalm 45:9 in Kannada 9 ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
Psalm 45:14 in Kannada 14 ಆಕೆಯು ಬೂಟೇದಾರಿ ಕಸೂತಿಕೆಲಸದ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
Song of Solomon 1:3 in Kannada 3 ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.
Song of Solomon 5:8 in Kannada 8 ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
Song of Solomon 5:16 in Kannada 16 ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.
Song of Solomon 6:8 in Kannada 8 ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
Isaiah 54:5 in Kannada 5 “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
Isaiah 62:4 in Kannada 4 ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
Daniel 2:44 in Kannada 44 “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 5:16 in Kannada 16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
Matthew 9:15 in Kannada 15 “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
Matthew 13:24 in Kannada 24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
Matthew 13:31 in Kannada 31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
Matthew 13:38 in Kannada 38 ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.
Matthew 13:44 in Kannada 44 “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Matthew 13:47 in Kannada 47 “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
Matthew 20:1 in Kannada 1 “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
Matthew 22:2 in Kannada 2 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Matthew 24:42 in Kannada 42 “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
Mark 2:19 in Kannada 19 ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
Luke 5:34 in Kannada 34 ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
Luke 12:35 in Kannada 35 “ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
Luke 21:34 in Kannada 34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
John 3:29 in Kannada 29 ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
Acts 20:8 in Kannada 8 ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
1 Corinthians 11:2 in Kannada 2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
2 Corinthians 11:2 in Kannada 2 ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.
Ephesians 5:25 in Kannada 25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
Philippians 2:15 in Kannada 15 ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.
2 Timothy 4:8 in Kannada 8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Titus 2:13 in Kannada 13 ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
2 Peter 1:13 in Kannada 13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
2 Peter 3:12 in Kannada 12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
Revelation 4:5 in Kannada 5 ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.
Revelation 14:4 in Kannada 4 ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
Revelation 19:7 in Kannada 7 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ದಮಾಡಿಕೊಂಡಿದ್ದಾಳೆ” ಎಂದು ಹೇಳಿತು.
Revelation 21:2 in Kannada 2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
Revelation 21:9 in Kannada 9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,