Matthew 25:21 in Kannada 21 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
Other Translations King James Version (KJV) His lord said unto him, Well done, thou good and faithful servant: thou hast been faithful over a few things, I will make thee ruler over many things: enter thou into the joy of thy lord.
American Standard Version (ASV) His lord said unto him, Well done, good and faithful servant: thou hast been faithful over a few things, I will set thee over many things; enter thou into the joy of thy lord.
Bible in Basic English (BBE) His lord said to him, Well done, good and true servant: you have been true in a small thing, I will give you control over great things: take your part in the joy of your lord.
Darby English Bible (DBY) His lord said to him, Well, good and faithful bondman, thou wast faithful over a few things, I will set thee over many things: enter into the joy of thy lord.
World English Bible (WEB) "His lord said to him, 'Well done, good and faithful servant. You have been faithful over a few things, I will set you over many things. Enter into the joy of your lord.'
Young's Literal Translation (YLT) `And his lord said to him, Well done, servant, good and faithful, over a few things thou wast faithful, over many things I will set thee; enter into the joy of thy lord.
Cross Reference 2 Chronicles 31:20 in Kannada 20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
Psalm 16:10 in Kannada 10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
Matthew 10:40 in Kannada 40 “ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುವವನಾಗಿದ್ದಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುವವನಾಗಿದ್ದಾನೆ.
Matthew 24:45 in Kannada 45 ಅಂದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
Matthew 24:47 in Kannada 47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
Matthew 25:23 in Kannada 23 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
Matthew 25:34 in Kannada 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
Matthew 25:46 in Kannada 46 ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
Luke 12:44 in Kannada 44 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Luke 16:10 in Kannada 10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.
Luke 22:28 in Kannada 28 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
John 12:26 in Kannada 26 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
John 14:3 in Kannada 3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
John 17:24 in Kannada 24 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
Romans 2:29 in Kannada 29 ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.
1 Corinthians 4:5 in Kannada 5 ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
2 Corinthians 5:9 in Kannada 9 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.
2 Corinthians 10:18 in Kannada 18 ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
Philippians 1:23 in Kannada 23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
2 Timothy 2:12 in Kannada 12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
1 Peter 1:7 in Kannada 7 ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
Revelation 2:10 in Kannada 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
Revelation 2:26 in Kannada 26 ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. “‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.
Revelation 3:21 in Kannada 21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
Revelation 7:17 in Kannada 17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
Revelation 21:7 in Kannada 7 ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.