Cross Reference Genesis 12:2 in Kannada 2 ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
Deuteronomy 11:23 in Kannada 23 ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.
Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 24:7 in Kannada 7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
Psalm 115:13 in Kannada 13 ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.
Isaiah 6:5 in Kannada 5 ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವಲ್ಲಾ!” ಎಂದು ಕೂಗಿಕೊಳ್ಳಲು,
Isaiah 9:7 in Kannada 7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
Isaiah 32:1 in Kannada 1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
Isaiah 33:22 in Kannada 22 ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
Jeremiah 23:5 in Kannada 5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
Ezekiel 37:24 in Kannada 24 “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
Daniel 9:25 in Kannada 25 ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರುಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರವವು; ಆ ಕಾಲವು ಬಹು ಕಷ್ಟಕಾಲ.
Zephaniah 3:15 in Kannada 15 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
Zechariah 9:9 in Kannada 9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 5:3 in Kannada 3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
Matthew 5:19 in Kannada 19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
Matthew 13:35 in Kannada 35 ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
Matthew 19:29 in Kannada 29 ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
Matthew 20:23 in Kannada 23 ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು.” ಎಂದು ಹೇಳಿದನು.
Matthew 21:5 in Kannada 5 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
Matthew 22:11 in Kannada 11 ಆ ಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
Matthew 25:21 in Kannada 21 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
Matthew 25:23 in Kannada 23 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
Matthew 25:41 in Kannada 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
Matthew 27:37 in Kannada 37 ಇದಲ್ಲದೆ ಆತನ ಮೇಲೆ ಹೊರಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
Mark 10:40 in Kannada 40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
Luke 1:31 in Kannada 31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
Luke 11:28 in Kannada 28 ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
Luke 12:32 in Kannada 32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Luke 19:38 in Kannada 38 “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
John 1:49 in Kannada 49 ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
John 12:13 in Kannada 13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
John 14:2 in Kannada 2 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
John 19:15 in Kannada 15 ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
John 19:19 in Kannada 19 ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
Acts 3:26 in Kannada 26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
Acts 15:18 in Kannada 18 ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.
Romans 8:17 in Kannada 17 ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
1 Corinthians 2:9 in Kannada 9 ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
1 Corinthians 6:9 in Kannada 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
1 Corinthians 15:50 in Kannada 50 ಪ್ರಿಯರೇ, ನಾನು ಹೇಳುವುದೇನಂದರೆ, ರಕ್ತಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
Galatians 3:13 in Kannada 13 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
Galatians 5:21 in Kannada 21 ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
Ephesians 1:3 in Kannada 3 ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮಿಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
Ephesians 5:5 in Kannada 5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
1 Thessalonians 2:12 in Kannada 12 ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
2 Timothy 2:12 in Kannada 12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
2 Timothy 4:8 in Kannada 8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Hebrews 4:3 in Kannada 3 ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು’ ಎಂದು ಹೇಳಿದೆಯಲ್ಲಾ.
Hebrews 9:26 in Kannada 26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.
Hebrews 11:16 in Kannada 16 ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
James 2:5 in Kannada 5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
1 Peter 1:3 in Kannada 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
1 Peter 1:19 in Kannada 19 ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
1 Peter 3:9 in Kannada 9 ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
Revelation 5:10 in Kannada 10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”
Revelation 13:8 in Kannada 8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
Revelation 17:8 in Kannada 8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
Revelation 19:16 in Kannada 16 ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.
Revelation 21:7 in Kannada 7 ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.