Matthew 25:40 in Kannada 40 ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Other Translations King James Version (KJV) And the King shall answer and say unto them, Verily I say unto you, Inasmuch as ye have done it unto one of the least of these my brethren, ye have done it unto me.
American Standard Version (ASV) And the King shall answer and say unto them, Verily I say unto you, Inasmuch as ye did it unto one of these my brethren, `even' these least, ye did it unto me.
Bible in Basic English (BBE) And the King will make answer and say to them, Truly I say to you, Because you did it to the least of these my brothers, you did it to me.
Darby English Bible (DBY) And the King answering shall say to them, Verily, I say to you, Inasmuch as ye have done it to one of the least of these my brethren, ye have done it to me.
World English Bible (WEB) "The King will answer them, 'Most assuredly I tell you, inasmuch as you did it to one of the least of these my brothers{The word for "brothers" here may be also correctly translated "brothers and sisters" or "siblings."}, you did it to me.'
Young's Literal Translation (YLT) `And the king answering, shall say to them, Verily I say to you, Inasmuch as ye did `it' to one of these my brethren -- the least -- to me ye did `it'.
Cross Reference 2 Samuel 9:1 in Kannada 1 ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,
2 Samuel 9:7 in Kannada 7 ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.
Proverbs 14:31 in Kannada 31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
Proverbs 19:17 in Kannada 17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
Proverbs 25:6 in Kannada 6 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
Matthew 10:40 in Kannada 40 “ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುವವನಾಗಿದ್ದಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುವವನಾಗಿದ್ದಾನೆ.
Matthew 10:42 in Kannada 42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
Matthew 12:49 in Kannada 49 ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.
Matthew 18:5 in Kannada 5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
Matthew 18:10 in Kannada 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Matthew 25:34 in Kannada 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
Matthew 28:10 in Kannada 10 ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.
Mark 3:34 in Kannada 34 “ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
Mark 9:41 in Kannada 41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
John 19:26 in Kannada 26 ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.
John 20:17 in Kannada 17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
John 21:15 in Kannada 15 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
Acts 9:4 in Kannada 4 ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.
Romans 8:29 in Kannada 29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
1 Corinthians 16:21 in Kannada 21 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.
2 Corinthians 4:5 in Kannada 5 ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
2 Corinthians 5:14 in Kannada 14 ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
2 Corinthians 8:7 in Kannada 7 ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.
Galatians 5:6 in Kannada 6 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜವಾಗಿದೆ.
Galatians 5:13 in Kannada 13 ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
Galatians 5:22 in Kannada 22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
Ephesians 5:30 in Kannada 30 ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
1 Thessalonians 4:9 in Kannada 9 ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
Hebrews 2:11 in Kannada 11 ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
Hebrews 6:10 in Kannada 10 ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
1 Peter 1:22 in Kannada 22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧೀಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
1 John 3:14 in Kannada 14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
1 John 4:7 in Kannada 7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
1 John 4:20 in Kannada 20 ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?