Matthew 25:41 in Kannada 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
Other Translations King James Version (KJV) Then shall he say also unto them on the left hand, Depart from me, ye cursed, into everlasting fire, prepared for the devil and his angels:
American Standard Version (ASV) Then shall he say also unto them on the left hand, Depart from me, ye cursed, into the eternal fire which is prepared for the devil and his angels:
Bible in Basic English (BBE) Then will he say to those on the left, Go from me, you cursed ones, into the eternal fire which is ready for the Evil One and his angels:
Darby English Bible (DBY) Then shall he say also to those on the left, Go from me, cursed, into eternal fire, prepared for the devil and his angels:
World English Bible (WEB) Then he will say also to those on the left hand, 'Depart from me, you cursed, into the eternal fire which is prepared for the devil and his angels;
Young's Literal Translation (YLT) Then shall he say also to those on the left hand, Go ye from me, the cursed, to the fire, the age-during, that hath been prepared for the Devil and his messengers;
Cross Reference Deuteronomy 27:15 in Kannada 15 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
Deuteronomy 28:16 in Kannada 16 ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು.
Psalm 6:8 in Kannada 8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
Psalm 119:21 in Kannada 21 ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
Psalm 119:115 in Kannada 115 ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
Psalm 139:19 in Kannada 19 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
Isaiah 66:24 in Kannada 24 “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
Jeremiah 17:5 in Kannada 5 ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
Matthew 3:12 in Kannada 12 ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
Matthew 5:22 in Kannada 22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿನರಕಕ್ಕೆ ಗುರಿಯಾಗುವನು.
Matthew 7:23 in Kannada 23 ಆಗ ನಾನು ಅವರಿಗೆ, “ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
Matthew 13:40 in Kannada 40 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.
Matthew 13:42 in Kannada 42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
Matthew 13:50 in Kannada 50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Matthew 18:8 in Kannada 8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
Matthew 25:46 in Kannada 46 ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
Mark 9:43 in Kannada 43 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Luke 13:27 in Kannada 27 ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
Luke 16:24 in Kannada 24 ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
John 8:44 in Kannada 44 ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.
Romans 9:22 in Kannada 22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
Galatians 3:10 in Kannada 10 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
2 Thessalonians 1:9 in Kannada 9 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
Hebrews 6:8 in Kannada 8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
2 Peter 2:4 in Kannada 4 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
1 John 3:10 in Kannada 10 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
Jude 1:6 in Kannada 6 ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
Revelation 12:7 in Kannada 7 ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೆಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
Revelation 14:10 in Kannada 10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
Revelation 20:10 in Kannada 10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.