Matthew 26:29 in Kannada 29 ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
Other Translations King James Version (KJV) But I say unto you, I will not drink henceforth of this fruit of the vine, until that day when I drink it new with you in my Father's kingdom.
American Standard Version (ASV) But I say unto you, I shall not drink henceforth of this fruit of the vine, until that day when I drink it new with you in my Father's kingdom.
Bible in Basic English (BBE) But I say to you that from now I will not take of this fruit of the vine, till that day when I take it new with you in my Father's kingdom.
Darby English Bible (DBY) But I say to you, that I will not at all drink henceforth of this fruit of the vine, until that day when I drink it new with you in the kingdom of my Father.
World English Bible (WEB) But I tell you that I will not drink of this fruit of the vine from now on, until that day when I drink it anew with you in my Father's Kingdom."
Young's Literal Translation (YLT) and I say to you, that I may not drink henceforth on this produce of the vine, till that day when I may drink it with you new in the reign of my Father.'
Cross Reference Psalm 4:7 in Kannada 7 ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
Psalm 40:3 in Kannada 3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
Psalm 104:15 in Kannada 15 ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
Song of Solomon 5:1 in Kannada 1 ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
Isaiah 24:9 in Kannada 9 ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.
Isaiah 25:6 in Kannada 6 ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
Isaiah 53:11 in Kannada 11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
Zephaniah 3:17 in Kannada 17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನನ್ನು ಮುಣುಗಿಸಿ ಪುನಃ ಚೇತನ ಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವವನಿಗೈಯುವನು.
Zechariah 9:17 in Kannada 17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.
Matthew 13:43 in Kannada 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
Matthew 16:28 in Kannada 28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Matthew 18:20 in Kannada 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
Matthew 25:34 in Kannada 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.
Matthew 28:20 in Kannada 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
Mark 14:25 in Kannada 25 ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
Luke 12:32 in Kannada 32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Luke 15:5 in Kannada 5 ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,
Luke 15:23 in Kannada 23 ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.
Luke 15:32 in Kannada 32 ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.
Luke 22:15 in Kannada 15 ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
Luke 22:29 in Kannada 29 ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;
John 15:11 in Kannada 11 ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
John 16:22 in Kannada 22 ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
John 17:13 in Kannada 13 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
Acts 10:41 in Kannada 41 ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
Revelation 5:8 in Kannada 8 ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
Revelation 7:17 in Kannada 17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
Revelation 14:3 in Kannada 3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.