Matthew 26:63 in Kannada 63 ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
Other Translations King James Version (KJV) But Jesus held his peace, And the high priest answered and said unto him, I adjure thee by the living God, that thou tell us whether thou be the Christ, the Son of God.
American Standard Version (ASV) But Jesus held his peace. And the high priest said unto him, I adjure thee by the living God, that thou tell us whether thou art the Christ, the Son of God.
Bible in Basic English (BBE) But Jesus said not a word. And the high priest said to him, I put you on oath, by the living God, that you will say to us if you are the Christ, the Son of God.
Darby English Bible (DBY) But Jesus was silent. And the high priest answering said to him, I adjure thee by the living God that thou tell us if *thou* art the Christ the Son of God.
World English Bible (WEB) But Jesus held his peace. The high priest answered him, "I adjure you by the living God, that you tell us whether you are the Christ, the Son of God."
Young's Literal Translation (YLT) and Jesus was silent. And the chief priest answering said to him, `I adjure thee, by the living God, that thou mayest say to us, if thou art the Christ -- the Son of God.'
Cross Reference Leviticus 5:1 in Kannada 1 “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
Numbers 5:19 in Kannada 19 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
1 Samuel 14:24 in Kannada 24 ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
1 Samuel 14:26 in Kannada 26 ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.
1 Samuel 14:28 in Kannada 28 ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
1 Kings 22:16 in Kannada 16 ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
2 Chronicles 18:15 in Kannada 15 ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 38:12 in Kannada 12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
Proverbs 29:24 in Kannada 24 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.
Isaiah 9:6 in Kannada 6 ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
Isaiah 53:7 in Kannada 7 ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
Daniel 3:16 in Kannada 16 ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
Matthew 16:16 in Kannada 16 ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
Matthew 26:63 in Kannada 63 ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
Matthew 27:12 in Kannada 12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
Matthew 27:14 in Kannada 14 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
Matthew 27:40 in Kannada 40 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
Matthew 27:43 in Kannada 43 ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
Matthew 27:54 in Kannada 54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
Mark 14:61 in Kannada 61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
Luke 22:66 in Kannada 66 ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
John 1:34 in Kannada 34 ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
John 1:49 in Kannada 49 ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
John 3:16 in Kannada 16 “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
John 5:18 in Kannada 18 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
John 6:69 in Kannada 69 ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
John 8:25 in Kannada 25 ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ.
John 10:24 in Kannada 24 ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
John 10:30 in Kannada 30 ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
John 10:36 in Kannada 36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’
John 18:37 in Kannada 37 ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
John 19:7 in Kannada 7 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
John 19:9 in Kannada 9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.
John 20:31 in Kannada 31 ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
Acts 8:32 in Kannada 32 ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
1 Peter 2:23 in Kannada 23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
1 John 5:11 in Kannada 11 ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.