Matthew 28:20 in Kannada 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
Other Translations King James Version (KJV) Teaching them to observe all things whatsoever I have commanded you: and, lo, I am with you alway, even unto the end of the world. Amen.
American Standard Version (ASV) teaching them to observe all things whatsoever I commanded you: and lo, I am with you always, even unto the end of the world.
Bible in Basic English (BBE) Teaching them to keep all the rules which I have given you: and see, I am ever with you, even to the end of the world.
Darby English Bible (DBY) teaching them to observe all things whatsoever I have enjoined you. And behold, *I* am with you all the days, until the completion of the age.
World English Bible (WEB) teaching them to observe all things that I commanded you. Behold, I am with you always, even to the end of the age." Amen.
Young's Literal Translation (YLT) teaching them to observe all, whatever I did command you,) and lo, I am with you all the days -- till the full end of the age.'
Cross Reference Genesis 39:2 in Kannada 2 ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.
Genesis 39:21 in Kannada 21 ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
Exodus 3:12 in Kannada 12 ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
Deuteronomy 5:32 in Kannada 32 ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
Deuteronomy 12:32 in Kannada 32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
Joshua 1:5 in Kannada 5 ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
1 Kings 1:36 in Kannada 36 ಯೆಹೋಯಾದವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
1 Chronicles 16:36 in Kannada 36 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
Psalm 46:7 in Kannada 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
Psalm 46:11 in Kannada 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.
Psalm 72:19 in Kannada 19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
Isaiah 8:8 in Kannada 8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”
Isaiah 41:10 in Kannada 10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಕೊಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
Matthew 1:23 in Kannada 23 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
Matthew 6:13 in Kannada 13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು”
Matthew 7:24 in Kannada 24 ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.
Matthew 13:39 in Kannada 39 ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.
Matthew 13:49 in Kannada 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.
Matthew 18:20 in Kannada 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
Matthew 24:3 in Kannada 3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
Mark 16:20 in Kannada 20 ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
John 14:18 in Kannada 18 “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
Acts 2:42 in Kannada 42 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Acts 18:9 in Kannada 9 ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
Acts 20:20 in Kannada 20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ
Acts 20:27 in Kannada 27 ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
1 Corinthians 11:2 in Kannada 2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
1 Corinthians 11:23 in Kannada 23 ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,
1 Corinthians 14:37 in Kannada 37 ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.
Ephesians 4:11 in Kannada 11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.
Ephesians 4:20 in Kannada 20 ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.
Colossians 1:28 in Kannada 28 ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
1 Thessalonians 4:1 in Kannada 1 ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
2 Thessalonians 3:6 in Kannada 6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
1 Timothy 6:1 in Kannada 1 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.
2 Timothy 4:17 in Kannada 17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
Titus 2:1 in Kannada 1 ನಿನಗೆ ದೊರೆತ ಸ್ವಸ್ಥ ಭೋಧನೆಗೆ ಅನುಗುಣವಾಗಿ ಎಲ್ಲರು ಸನ್ನಡತೆಯಿಂದ ನಡೆಯುವಂತೆ ಉಪದೇಶಮಾಡು.
1 Peter 2:10 in Kannada 10 ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.
2 Peter 1:5 in Kannada 5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
2 Peter 3:2 in Kannada 2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
1 John 2:3 in Kannada 3 ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
1 John 3:19 in Kannada 19 ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
Revelation 1:18 in Kannada 18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
Revelation 22:14 in Kannada 14 ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
Revelation 22:20 in Kannada 20 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.