Matthew 3:7 in Kannada 7 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
Other Translations King James Version (KJV) But when he saw many of the Pharisees and Sadducees come to his baptism, he said unto them, O generation of vipers, who hath warned you to flee from the wrath to come?
American Standard Version (ASV) But when he saw many of the Pharisees and Sadducees coming to his baptism, he said unto them, Ye offspring of vipers, who warned you to flee from the wrath to come?
Bible in Basic English (BBE) But when he saw a number of the Pharisees and Sadducees coming to his baptism, he said to them, Offspring of snakes, at whose word are you going in flight from the wrath to come?
Darby English Bible (DBY) But seeing many of the Pharisees and Sadducees coming to his baptism, he said to them, Offspring of vipers, who has forewarned you to flee from the coming wrath?
World English Bible (WEB) But when he saw many of the Pharisees and Sadducees coming for his baptism, he said to them, "You offspring of vipers, who warned you to flee from the wrath to come?
Young's Literal Translation (YLT) And having seen many of the Pharisees and Sadducees coming about his baptism, he said to them, `Brood of vipers! who did shew you to flee from the coming wrath?
Cross Reference Genesis 3:15 in Kannada 15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
Psalm 58:3 in Kannada 3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
Isaiah 57:3 in Kannada 3 ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
Isaiah 59:5 in Kannada 5 ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.
Jeremiah 6:10 in Kannada 10 ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಸುನ್ನತಿ ಇಲ್ಲದವರು, ಅವರ ಕಿವಿ ಕೇಳಲಾರದು. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
Jeremiah 51:6 in Kannada 6 ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲಿಗೆ ಪ್ರತೀಕಾರ ಮಾಡುವನು.
Ezekiel 3:18 in Kannada 18 ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
Ezekiel 33:3 in Kannada 3 ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
Matthew 5:20 in Kannada 20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
Matthew 12:24 in Kannada 24 ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
Matthew 12:34 in Kannada 34 ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
Matthew 15:12 in Kannada 12 ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
Matthew 16:6 in Kannada 6 ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
Matthew 16:11 in Kannada 11 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
Matthew 22:15 in Kannada 15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
Matthew 22:23 in Kannada 23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
Matthew 22:34 in Kannada 34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
Matthew 23:13 in Kannada 13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Matthew 23:33 in Kannada 33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
Mark 7:3 in Kannada 3 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
Mark 8:15 in Kannada 15 ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
Mark 12:13 in Kannada 13 ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
Mark 12:18 in Kannada 18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
Luke 3:7 in Kannada 7 ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?
Luke 7:30 in Kannada 30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
Luke 11:39 in Kannada 39 ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
Luke 16:14 in Kannada 14 ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
Luke 18:11 in Kannada 11 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
John 1:24 in Kannada 24 ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.
John 7:45 in Kannada 45 ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
John 8:44 in Kannada 44 ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.
John 9:40 in Kannada 40 ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
Acts 4:1 in Kannada 1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
Acts 5:17 in Kannada 17 ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
Acts 15:5 in Kannada 5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
Acts 20:31 in Kannada 31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
Acts 23:6 in Kannada 6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
Acts 26:5 in Kannada 5 ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
Romans 1:18 in Kannada 18 ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
Romans 5:9 in Kannada 9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
1 Thessalonians 1:10 in Kannada 10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
2 Thessalonians 1:9 in Kannada 9 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
Hebrews 6:18 in Kannada 18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
Hebrews 11:7 in Kannada 7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
1 John 3:10 in Kannada 10 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
Revelation 6:16 in Kannada 16 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
Revelation 12:9 in Kannada 9 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.