Matthew 4:23 in Kannada 23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Other Translations King James Version (KJV) And Jesus went about all Galilee, teaching in their synagogues, and preaching the gospel of the kingdom, and healing all manner of sickness and all manner of disease among the people.
American Standard Version (ASV) And Jesus went about in all Galilee, teaching in their synagogues, and preaching the gospel of the kingdom, and healing all manner of disease and all manner of sickness among the people.
Bible in Basic English (BBE) And Jesus went about in all Galilee, teaching in their Synagogues and preaching the good news of the kingdom, and making well those who were ill with any disease among the people.
Darby English Bible (DBY) And [Jesus] went round the whole [of] Galilee, teaching in their synagogues, and preaching the glad tidings of the kingdom, and healing every disease and every bodily weakness among the people.
World English Bible (WEB) Jesus went about in all Galilee, teaching in their synagogues, preaching the Gospel of the Kingdom, and healing every disease and every sickness among the people.
Young's Literal Translation (YLT) And Jesus was going about all Galilee teaching in their synagogues, and proclaiming the good news of the reign, and healing every disease, and every malady among the people,
Cross Reference Psalm 74:8 in Kannada 8 “ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
Psalm 103:3 in Kannada 3 ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 8:16 in Kannada 16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
Matthew 9:35 in Kannada 35 ತರುವಾಯ ಯೇಸು ಎಲ್ಲಾ ಪಟ್ಟಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Matthew 10:7 in Kannada 7 ‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
Matthew 11:5 in Kannada 5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
Matthew 12:9 in Kannada 9 ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
Matthew 13:19 in Kannada 19 ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
Matthew 13:54 in Kannada 54 ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
Matthew 14:14 in Kannada 14 ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
Matthew 15:30 in Kannada 30 ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
Matthew 24:14 in Kannada 14 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
Mark 1:14 in Kannada 14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
Mark 1:21 in Kannada 21 ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
Mark 1:32 in Kannada 32 ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
Mark 1:39 in Kannada 39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
Mark 3:10 in Kannada 10 ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
Mark 6:2 in Kannada 2 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
Mark 6:6 in Kannada 6 ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
Luke 4:15 in Kannada 15 ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
Luke 4:40 in Kannada 40 ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
Luke 4:43 in Kannada 43 ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
Luke 5:17 in Kannada 17 ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
Luke 6:17 in Kannada 17 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
Luke 7:22 in Kannada 22 ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.
Luke 8:1 in Kannada 1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
Luke 9:11 in Kannada 11 ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
Luke 10:9 in Kannada 9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
Luke 13:10 in Kannada 10 ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
Luke 20:1 in Kannada 1 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
John 6:59 in Kannada 59 ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
John 7:1 in Kannada 1 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
John 18:20 in Kannada 20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
Acts 5:15 in Kannada 15 ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
Acts 9:13 in Kannada 13 ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
Acts 10:38 in Kannada 38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
Acts 18:4 in Kannada 4 ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
Acts 20:25 in Kannada 25 ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
Romans 10:15 in Kannada 15 ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.