Matthew 5:19 in Kannada 19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
Other Translations King James Version (KJV) Whosoever therefore shall break one of these least commandments, and shall teach men so, he shall be called the least in the kingdom of heaven: but whosoever shall do and teach them, the same shall be called great in the kingdom of heaven.
American Standard Version (ASV) Whosoever therefore shall break one of these least commandments, and shall teach men so, shall be called least in the kingdom of heaven: but whosoever shall do and teach them, he shall be called great in the kingdom of heaven.
Bible in Basic English (BBE) Whoever then goes against the smallest of these laws, teaching men to do the same, will be named least in the kingdom of heaven; but he who keeps the laws, teaching others to keep them, will be named great in the kingdom of heaven.
Darby English Bible (DBY) Whosoever then shall do away with one of these least commandments, and shall teach men so, shall be called least in the kingdom of the heavens; but whosoever shall practise and teach [them], *he* shall be called great in the kingdom of the heavens.
World English Bible (WEB) Whoever, therefore, shall break one of these least commandments, and teach others to do so, shall be called least in the Kingdom of Heaven; but whoever shall do and teach them shall be called great in the Kingdom of Heaven.
Young's Literal Translation (YLT) `Whoever therefore may loose one of these commands -- the least -- and may teach men so, least he shall be called in the reign of the heavens, but whoever may do and may teach `them', he shall be called great in the reign of the heavens.
Cross Reference Deuteronomy 12:32 in Kannada 32 ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
Deuteronomy 27:26 in Kannada 26 “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
1 Samuel 2:30 in Kannada 30 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
Psalm 119:6 in Kannada 6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
Psalm 119:128 in Kannada 128 ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
Daniel 12:3 in Kannada 3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
Malachi 2:8 in Kannada 8 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Matthew 11:11 in Kannada 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 15:3 in Kannada 3 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
Matthew 19:28 in Kannada 28 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Matthew 20:26 in Kannada 26 ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
Matthew 23:16 in Kannada 16 “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
Matthew 28:20 in Kannada 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
Luke 1:15 in Kannada 15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
Luke 9:48 in Kannada 48 ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.
Luke 11:42 in Kannada 42 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
Luke 22:24 in Kannada 24 ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
Acts 1:1 in Kannada 1 ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,
Romans 3:8 in Kannada 8 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
Romans 6:1 in Kannada 1 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
Romans 6:15 in Kannada 15 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
Romans 13:8 in Kannada 8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
Galatians 3:10 in Kannada 10 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
Galatians 5:14 in Kannada 14 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
Philippians 3:17 in Kannada 17 ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
Philippians 4:8 in Kannada 8 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
1 Thessalonians 2:10 in Kannada 10 ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.
1 Thessalonians 4:1 in Kannada 1 ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
1 Timothy 4:11 in Kannada 11 ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
1 Timothy 6:3 in Kannada 3 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
1 Timothy 6:11 in Kannada 11 ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
Titus 2:8 in Kannada 8 ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
Titus 3:8 in Kannada 8 ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
James 2:10 in Kannada 10 ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂತವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
1 Peter 5:4 in Kannada 4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
Revelation 2:14 in Kannada 14 ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.
Revelation 2:20 in Kannada 20 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.