Cross Reference Genesis 4:5 in Kannada 5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
Genesis 37:4 in Kannada 4 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
Genesis 37:8 in Kannada 8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
Deuteronomy 15:11 in Kannada 11 ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
Deuteronomy 18:18 in Kannada 18 ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
1 Samuel 17:27 in Kannada 27 ಅದಕ್ಕೆ ಅವರು ಮುಂಚಿನಂತೆ ಇಂಥಿಂಥದು ದೊರಕುವುದೆಂದು ಉತ್ತರಕೊಟ್ಟರು.
1 Samuel 18:8 in Kannada 8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು
1 Samuel 20:30 in Kannada 30 ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
1 Samuel 22:12 in Kannada 12 ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.
2 Samuel 6:20 in Kannada 20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.
2 Samuel 16:7 in Kannada 7 ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,
1 Kings 21:4 in Kannada 4 “ನನ್ನ ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
2 Chronicles 16:10 in Kannada 10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
Nehemiah 5:8 in Kannada 8 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
Esther 3:5 in Kannada 5 ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
Psalm 7:4 in Kannada 4 ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲೆಕ್ಕೆ ಕೆಡವಿ ತುಳಿಯಲಿ;
Psalm 14:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
Psalm 25:3 in Kannada 3 ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
Psalm 35:19 in Kannada 19 ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
Psalm 37:8 in Kannada 8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
Psalm 49:10 in Kannada 10 ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
Psalm 69:4 in Kannada 4 ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
Psalm 92:6 in Kannada 6 ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
Psalm 109:3 in Kannada 3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
Proverbs 14:16 in Kannada 16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
Proverbs 18:6 in Kannada 6 ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
Jeremiah 17:11 in Kannada 11 ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
Lamentations 3:52 in Kannada 52 ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.
Daniel 2:12 in Kannada 12 ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.
Daniel 3:13 in Kannada 13 ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
Daniel 3:19 in Kannada 19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
Obadiah 1:10 in Kannada 10 ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
Obadiah 1:12 in Kannada 12 ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
Matthew 3:17 in Kannada 17 ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
Matthew 5:23 in Kannada 23 ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
Matthew 5:28 in Kannada 28 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
Matthew 5:34 in Kannada 34 ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.
Matthew 5:44 in Kannada 44 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
Matthew 10:17 in Kannada 17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
Matthew 10:28 in Kannada 28 ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
Matthew 11:18 in Kannada 18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
Matthew 12:24 in Kannada 24 ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
Matthew 17:5 in Kannada 5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
Matthew 18:8 in Kannada 8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
Matthew 18:21 in Kannada 21 ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
Matthew 18:35 in Kannada 35 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
Matthew 23:15 in Kannada 15 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.
Matthew 23:33 in Kannada 33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
Matthew 25:41 in Kannada 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
Matthew 26:59 in Kannada 59 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
Mark 9:43 in Kannada 43 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Mark 14:55 in Kannada 55 ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
Mark 15:1 in Kannada 1 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
Luke 12:5 in Kannada 5 ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
Luke 16:23 in Kannada 23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,
John 7:20 in Kannada 20 ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
John 8:48 in Kannada 48 ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
John 11:47 in Kannada 47 ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
John 15:25 in Kannada 25 ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
Acts 3:20 in Kannada 20 ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.
Acts 5:27 in Kannada 27 ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,
Acts 7:37 in Kannada 37 ಆ ಮೋಶೆಯೇ, “ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು” ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
Acts 17:18 in Kannada 18 ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
Romans 12:10 in Kannada 10 ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
1 Corinthians 6:6 in Kannada 6 ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
1 Corinthians 6:10 in Kannada 10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
Ephesians 4:26 in Kannada 26 “ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
Ephesians 4:31 in Kannada 31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
1 Thessalonians 4:6 in Kannada 6 ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತೀಕಾರ ಮಾಡುವವನಾಗಿದ್ದಾನೆ.
Titus 3:2 in Kannada 2 ಯಾರನ್ನೂ ದೂಷಿಸದೆ, ನಿಂದಿಸದೆ ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
Hebrews 5:9 in Kannada 9 ಇದಲ್ಲದೆ ಆತನು ಪರಿಪೂರ್ಣಗೊಳಿಸಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
Hebrews 12:25 in Kannada 25 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
James 2:20 in Kannada 20 ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
James 3:6 in Kannada 6 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
1 Peter 2:23 in Kannada 23 ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
1 Peter 3:9 in Kannada 9 ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
1 John 2:9 in Kannada 9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
1 John 3:10 in Kannada 10 ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
1 John 3:14 in Kannada 14 ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
1 John 4:20 in Kannada 20 ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
1 John 5:16 in Kannada 16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
Jude 1:9 in Kannada 9 ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನ್ನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.
Revelation 20:14 in Kannada 14 ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.