Matthew 6:10 in Kannada 10 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
Other Translations King James Version (KJV) Thy kingdom come, Thy will be done in earth, as it is in heaven.
American Standard Version (ASV) Thy kingdom come. Thy will be done, as in heaven, so on earth.
Bible in Basic English (BBE) Let your kingdom come. Let your pleasure be done, as in heaven, so on earth.
Darby English Bible (DBY) let thy kingdom come, let thy will be done as in heaven so upon the earth;
World English Bible (WEB) Let your Kingdom come. Let your will be done, as in heaven, so on earth.
Young's Literal Translation (YLT) `Thy reign come: Thy will come to pass, as in heaven also on the earth.
Cross Reference Nehemiah 9:6 in Kannada 6 ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.
Psalm 2:6 in Kannada 6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
Psalm 40:8 in Kannada 8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೊಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
Psalm 103:19 in Kannada 19 ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
Isaiah 2:2 in Kannada 2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Jeremiah 23:5 in Kannada 5 ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
Daniel 2:44 in Kannada 44 “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
Daniel 4:35 in Kannada 35 ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
Daniel 7:13 in Kannada 13 ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
Daniel 7:27 in Kannada 27 ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
Zechariah 9:9 in Kannada 9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 4:17 in Kannada 17 ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
Matthew 7:21 in Kannada 21 ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
Matthew 12:50 in Kannada 50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ” ಆಗಿದ್ದಾರೆ ಅಂದನು.
Matthew 16:28 in Kannada 28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Matthew 26:42 in Kannada 42 ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
Mark 3:35 in Kannada 35 ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
Mark 11:10 in Kannada 10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.
Luke 19:11 in Kannada 11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
Luke 19:38 in Kannada 38 “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
Luke 22:42 in Kannada 42 “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
John 4:34 in Kannada 34 ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
John 6:40 in Kannada 40 ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
John 7:17 in Kannada 17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
Acts 13:22 in Kannada 22 ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
Acts 21:14 in Kannada 14 ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.
Acts 22:14 in Kannada 14 “ಆಗ ಅವನು; ‘ನಮ್ಮ ಪಿತೃಗಳ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
Romans 12:2 in Kannada 2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
Ephesians 6:6 in Kannada 6 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
Colossians 1:9 in Kannada 9 ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮಿಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
Colossians 1:13 in Kannada 13 ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
1 Thessalonians 4:3 in Kannada 3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
1 Thessalonians 5:18 in Kannada 18 ಎಲ್ಲದಕ್ಕಾಗಿ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
Hebrews 1:14 in Kannada 14 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
Hebrews 10:7 in Kannada 7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
Hebrews 10:36 in Kannada 36 ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
1 Peter 2:15 in Kannada 15 ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
1 Peter 4:2 in Kannada 2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
Revelation 11:15 in Kannada 15 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
Revelation 12:10 in Kannada 10 ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತಾಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
Revelation 19:6 in Kannada 6 ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.
Revelation 20:4 in Kannada 4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.