Cross Reference Genesis 22:1 in Kannada 1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
Exodus 15:18 in Kannada 18 ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”
Numbers 5:22 in Kannada 22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
Deuteronomy 8:2 in Kannada 2 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
Deuteronomy 8:16 in Kannada 16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
Deuteronomy 27:15 in Kannada 15 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
1 Kings 1:36 in Kannada 36 ಯೆಹೋಯಾದವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
1 Chronicles 4:10 in Kannada 10 ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.
1 Chronicles 16:36 in Kannada 36 ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
1 Chronicles 29:11 in Kannada 11 ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
Psalm 10:16 in Kannada 16 ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
Psalm 41:13 in Kannada 13 ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
Psalm 47:2 in Kannada 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
Psalm 47:7 in Kannada 7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
Psalm 72:19 in Kannada 19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
Psalm 89:52 in Kannada 52 ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
Psalm 106:48 in Kannada 48 ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!
Psalm 121:7 in Kannada 7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.
Psalm 145:10 in Kannada 10 ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
Proverbs 30:8 in Kannada 8 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
Jeremiah 15:21 in Kannada 21 ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.
Jeremiah 28:6 in Kannada 6 “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
Daniel 4:25 in Kannada 25 ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುವುದು ನಿನಗೆ ತಿಳಿದು ಬರುವುದರೊಳಗೆ ಏಳು ವರುಷ ಹೀಗೆ ಕಳೆಯುವುದು.
Daniel 4:34 in Kannada 34 ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
Daniel 7:18 in Kannada 18 ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
Matthew 5:37 in Kannada 37 ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
Matthew 6:10 in Kannada 10 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
Matthew 26:41 in Kannada 41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
Matthew 28:20 in Kannada 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
Luke 22:31 in Kannada 31 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.
John 17:15 in Kannada 15 ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
1 Corinthians 10:13 in Kannada 13 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
1 Corinthians 14:16 in Kannada 16 ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಲಿಯದಲ್ಲವೇ?
2 Corinthians 1:20 in Kannada 20 ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.
2 Corinthians 12:7 in Kannada 7 ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ಪ್ರಕಟನೆಗಳ ಹೆಚ್ಚಳದಿಂದ ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.
Galatians 1:4 in Kannada 4 ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
1 Thessalonians 1:10 in Kannada 10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
2 Thessalonians 3:3 in Kannada 3 ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
1 Timothy 1:17 in Kannada 17 ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
1 Timothy 6:15 in Kannada 15 ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,
2 Timothy 4:17 in Kannada 17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
Hebrews 2:14 in Kannada 14 ಇದಲ್ಲದೆ ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
Hebrews 11:36 in Kannada 36 ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
1 Peter 5:8 in Kannada 8 ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
2 Peter 2:9 in Kannada 9 ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
1 John 3:8 in Kannada 8 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
1 John 5:18 in Kannada 18 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
Revelation 1:18 in Kannada 18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
Revelation 2:10 in Kannada 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
Revelation 3:10 in Kannada 10 ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.
Revelation 3:14 in Kannada 14 “ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,
Revelation 5:13 in Kannada 13 ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
Revelation 7:14 in Kannada 14 ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
Revelation 19:1 in Kannada 1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
Revelation 19:4 in Kannada 4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು.
Revelation 21:4 in Kannada 4 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.