Matthew 6:2 in Kannada 2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Other Translations King James Version (KJV) Therefore when thou doest thine alms, do not sound a trumpet before thee, as the hypocrites do in the synagogues and in the streets, that they may have glory of men. Verily I say unto you, They have their reward.
American Standard Version (ASV) When therefore thou doest alms, sound not a trumpet before thee, as the hypocrites do in the synagogues and in the streets, that they may have glory of men. Verily I say unto you, They have received their reward.
Bible in Basic English (BBE) When then you give money to the poor, do not make a noise about it, as the false-hearted men do in the Synagogues and in the streets, so that they may have glory from men. Truly, I say to you, They have their reward.
Darby English Bible (DBY) When therefore thou doest alms, sound not a trumpet before thee, as the hypocrites do in the synagogues and in the streets, so that they may have glory from men. Verily I say unto you, They have their reward.
World English Bible (WEB) Therefore when you do merciful deeds, don't sound a trumpet before yourself, as the hypocrites do in the synagogues and in the streets, that they may get glory from men. Most assuredly I tell you, they have received their reward.
Young's Literal Translation (YLT) whenever, therefore, thou mayest do kindness, thou mayest not sound a trumpet before thee as the hypocrites do, in the synagogues, and in the streets, that they may have glory from men; verily I say to you -- they have their reward!
Cross Reference 1 Samuel 15:30 in Kannada 30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.
Job 31:16 in Kannada 16 ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?
Psalm 37:21 in Kannada 21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
Psalm 112:9 in Kannada 9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
Proverbs 19:17 in Kannada 17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
Proverbs 20:6 in Kannada 6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
Ecclesiastes 11:2 in Kannada 2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
Isaiah 9:17 in Kannada 17 ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
Isaiah 10:6 in Kannada 6 ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
Isaiah 58:7 in Kannada 7 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
Isaiah 58:10 in Kannada 10 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
Hosea 8:1 in Kannada 1 “ತುತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
Matthew 5:18 in Kannada 18 ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
Matthew 6:5 in Kannada 5 “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 6:16 in Kannada 16 “ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 7:5 in Kannada 5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
Matthew 15:7 in Kannada 7 ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
Matthew 16:3 in Kannada 3 ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
Matthew 22:18 in Kannada 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
Matthew 23:6 in Kannada 6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
Matthew 23:13 in Kannada 13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Matthew 24:51 in Kannada 51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
Mark 7:6 in Kannada 6 ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
Mark 12:39 in Kannada 39 ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
Luke 6:24 in Kannada 24 ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.
Luke 6:42 in Kannada 42 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ದಿಮ್ಮಿಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
Luke 11:41 in Kannada 41 ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
Luke 11:43 in Kannada 43 ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.
Luke 12:33 in Kannada 33 ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
Luke 12:56 in Kannada 56 ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
Luke 13:15 in Kannada 15 ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
Luke 20:46 in Kannada 46 “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
John 5:41 in Kannada 41 “ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,
John 5:44 in Kannada 44 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
John 7:18 in Kannada 18 ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
John 13:29 in Kannada 29 ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
Acts 9:36 in Kannada 36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
Acts 10:2 in Kannada 2 ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
Acts 10:4 in Kannada 4 ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
Acts 10:31 in Kannada 31 ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
Acts 11:29 in Kannada 29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
Acts 24:17 in Kannada 17 “ಕೆಲವು ವರುಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.
Romans 12:8 in Kannada 8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
2 Corinthians 9:6 in Kannada 6 ಆದರೆ ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
Galatians 2:10 in Kannada 10 ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
Ephesians 4:28 in Kannada 28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
1 Thessalonians 2:6 in Kannada 6 ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
1 Timothy 6:18 in Kannada 18 ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.
Philemon 1:7 in Kannada 7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.
Hebrews 13:16 in Kannada 16 ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
James 2:15 in Kannada 15 ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ಆ ದಿನದ ಆಹಾರವೂ ಅಗತ್ಯವಾಗಿರುವಾಗ,
1 Peter 4:11 in Kannada 11 ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
1 John 3:17 in Kannada 17 ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?