Matthew 7:11 in Kannada 11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
Other Translations King James Version (KJV) If ye then, being evil, know how to give good gifts unto your children, how much more shall your Father which is in heaven give good things to them that ask him?
American Standard Version (ASV) If ye then, being evil, know how to give good gifts unto your children, how much more shall your Father who is in heaven give good things to them that ask him?
Bible in Basic English (BBE) If you, then, being evil, are able to give good things to your children, how much more will your Father in heaven give good things to those who make requests to him?
Darby English Bible (DBY) If therefore *ye*, being wicked, know [how] to give good gifts to your children, how much rather shall your Father who is in the heavens give good things to them that ask of him?
World English Bible (WEB) If you then, being evil, know how to give good gifts to your children, how much more will your Father who is in heaven give good things to those who ask him!
Young's Literal Translation (YLT) if, therefore, ye being evil, have known good gifts to give to your children, how much more shall your Father who `is' in the heavens give good things to those asking him?
Cross Reference Genesis 6:5 in Kannada 5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
Genesis 8:21 in Kannada 21 ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.
Exodus 34:6 in Kannada 6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
2 Samuel 7:19 in Kannada 19 ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.
Job 15:16 in Kannada 16 ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
Psalm 84:11 in Kannada 11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?
Psalm 85:12 in Kannada 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
Psalm 86:5 in Kannada 5 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
Psalm 86:15 in Kannada 15 ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
Psalm 103:11 in Kannada 11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
Isaiah 49:15 in Kannada 15 ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
Isaiah 55:8 in Kannada 8 ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
Jeremiah 17:9 in Kannada 9 ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
Jeremiah 33:14 in Kannada 14 ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
Hosea 11:8 in Kannada 8 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
Hosea 14:2 in Kannada 2 ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.
Micah 7:18 in Kannada 18 ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
Malachi 1:6 in Kannada 6 “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
Luke 2:10 in Kannada 10 ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
Luke 11:11 in Kannada 11 ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
John 3:16 in Kannada 16 “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
Romans 3:9 in Kannada 9 ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
Romans 3:19 in Kannada 19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
Romans 5:8 in Kannada 8 ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
Romans 8:32 in Kannada 32 ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
2 Corinthians 9:8 in Kannada 8 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
Galatians 3:22 in Kannada 22 ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
Ephesians 2:1 in Kannada 1 ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
Titus 3:3 in Kannada 3 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
James 1:17 in Kannada 17 ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
1 John 3:1 in Kannada 1 ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಲಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
1 John 4:10 in Kannada 10 ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.