Matthew 7:13 in Kannada 13 “ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
Other Translations King James Version (KJV) Enter ye in at the strait gate: for wide is the gate, and broad is the way, that leadeth to destruction, and many there be which go in thereat:
American Standard Version (ASV) Enter ye in by the narrow gate: for wide is the gate, and broad is the way, that leadeth to destruction, and many are they that enter in thereby.
Bible in Basic English (BBE) Go in by the narrow door; for wide is the door and open is the way which goes to destruction, and great numbers go in by it.
Darby English Bible (DBY) Enter in through the narrow gate, for wide the gate and broad the way that leads to destruction, and many are they who enter in through it.
World English Bible (WEB) "Enter in by the narrow gate; for wide is the gate and broad is the way that leads to destruction, and many are those who enter in by it.
Young's Literal Translation (YLT) `Go ye in through the strait gate, because wide `is' the gate, and broad the way that is leading to the destruction, and many are those going in through it;
Cross Reference Genesis 6:5 in Kannada 5 ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
Genesis 6:12 in Kannada 12 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.
Psalm 14:2 in Kannada 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
Proverbs 7:27 in Kannada 27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.
Proverbs 9:6 in Kannada 6 ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
Proverbs 16:25 in Kannada 25 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
Isaiah 1:9 in Kannada 9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
Isaiah 55:7 in Kannada 7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
Ezekiel 18:27 in Kannada 27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 3:8 in Kannada 8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
Matthew 18:2 in Kannada 2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
Matthew 23:13 in Kannada 13 “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Matthew 25:41 in Kannada 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
Matthew 25:46 in Kannada 46 ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
Luke 9:33 in Kannada 33 ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
Luke 13:24 in Kannada 24 ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
Luke 14:33 in Kannada 33 ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
John 10:9 in Kannada 9 ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
John 14:6 in Kannada 6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
Acts 2:38 in Kannada 38 ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
Acts 3:19 in Kannada 19 ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
Romans 3:9 in Kannada 9 ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
Romans 9:22 in Kannada 22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
2 Corinthians 4:4 in Kannada 4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
2 Corinthians 6:17 in Kannada 17 ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
Galatians 5:24 in Kannada 24 ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.
Ephesians 2:2 in Kannada 2 ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
2 Thessalonians 1:8 in Kannada 8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
1 Peter 4:17 in Kannada 17 ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
1 John 5:19 in Kannada 19 ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
Revelation 12:9 in Kannada 9 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
Revelation 13:8 in Kannada 8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
Revelation 20:3 in Kannada 3 ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.
Revelation 20:15 in Kannada 15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.