Matthew 7:21 in Kannada 21 ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
Other Translations King James Version (KJV) Not every one that saith unto me, Lord, Lord, shall enter into the kingdom of heaven; but he that doeth the will of my Father which is in heaven.
American Standard Version (ASV) Not every one that saith unto me, Lord, Lord, shall enter into the kingdom of heaven; but he that doeth the will of my Father who is in heaven.
Bible in Basic English (BBE) Not everyone who says to me, Lord, Lord, will go into the kingdom of heaven; but he who does the pleasure of my Father in heaven.
Darby English Bible (DBY) Not every one who says to me, Lord, Lord, shall enter into the kingdom of the heavens, but he that does the will of my Father who is in the heavens.
World English Bible (WEB) Not everyone who says to me, 'Lord, Lord,' will enter into the Kingdom of Heaven; but he who does the will of my Father who is in heaven.
Young's Literal Translation (YLT) `Not every one who is saying to me Lord, lord, shall come into the reign of the heavens; but he who is doing the will of my Father who is in the heavens.
Cross Reference Isaiah 48:1 in Kannada 1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
Hosea 8:2 in Kannada 2 ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
Matthew 10:32 in Kannada 32 “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
Matthew 12:50 in Kannada 50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ” ಆಗಿದ್ದಾರೆ ಅಂದನು.
Matthew 16:17 in Kannada 17 ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Matthew 18:3 in Kannada 3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 18:10 in Kannada 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Matthew 18:19 in Kannada 19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
Matthew 18:35 in Kannada 35 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
Matthew 19:24 in Kannada 24 “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.
Matthew 21:29 in Kannada 29 ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.
Matthew 25:11 in Kannada 11 ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.
Matthew 25:21 in Kannada 21 ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
Matthew 26:42 in Kannada 42 ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
Mark 3:35 in Kannada 35 ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
Mark 10:23 in Kannada 23 ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.
Luke 6:46 in Kannada 46 “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?
Luke 11:28 in Kannada 28 ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
Luke 13:25 in Kannada 25 ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
Luke 18:25 in Kannada 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
John 3:5 in Kannada 5 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
John 5:17 in Kannada 17 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.
John 6:40 in Kannada 40 ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
John 7:17 in Kannada 17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
John 10:29 in Kannada 29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
John 14:7 in Kannada 7 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
John 15:23 in Kannada 23 ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.
Acts 14:22 in Kannada 22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
Acts 19:13 in Kannada 13 ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
Romans 2:13 in Kannada 13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
Romans 12:2 in Kannada 2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
Ephesians 6:6 in Kannada 6 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
Colossians 4:12 in Kannada 12 ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
1 Thessalonians 4:3 in Kannada 3 ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
1 Thessalonians 5:18 in Kannada 18 ಎಲ್ಲದಕ್ಕಾಗಿ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
Titus 1:16 in Kannada 16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಭಿತುಪಡಿಸುತ್ತಾರೆ.
Hebrews 4:6 in Kannada 6 ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
James 1:22 in Kannada 22 ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
James 2:20 in Kannada 20 ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
1 Peter 2:15 in Kannada 15 ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
1 Peter 4:2 in Kannada 2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
1 John 3:21 in Kannada 21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
Revelation 3:5 in Kannada 5 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
Revelation 22:14 in Kannada 14 ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.