Matthew 8:11 in Kannada 11 ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
Other Translations King James Version (KJV) And I say unto you, That many shall come from the east and west, and shall sit down with Abraham, and Isaac, and Jacob, in the kingdom of heaven.
American Standard Version (ASV) And I say unto you, that many shall come from the east and the west, and shall sit down with Abraham, and Isaac, and Jacob, in the kingdom of heaven:
Bible in Basic English (BBE) And I say to you that numbers will come from the east and the west, and will take their seats with Abraham and Isaac and Jacob, in the kingdom of heaven:
Darby English Bible (DBY) But I say unto you, that many shall come from [the] rising and setting [sun], and shall lie down at table with Abraham, and Isaac, and Jacob in the kingdom of the heavens;
World English Bible (WEB) I tell you that many will come from the east and the west, and will sit down with Abraham, Isaac, and Jacob in the Kingdom of Heaven,
Young's Literal Translation (YLT) and I say to you, that many from east and west shall come and recline (at meat) with Abraham, and Isaac, and Jacob, in the reign of the heavens,
Cross Reference Genesis 12:3 in Kannada 3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
Genesis 22:18 in Kannada 18 ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
Genesis 28:14 in Kannada 14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
Genesis 49:10 in Kannada 10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
Psalm 22:27 in Kannada 27 ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
Psalm 98:3 in Kannada 3 ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
Isaiah 2:2 in Kannada 2 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Isaiah 11:10 in Kannada 10 ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
Isaiah 49:6 in Kannada 6 ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
Isaiah 49:12 in Kannada 12 ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
Isaiah 52:10 in Kannada 10 ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
Isaiah 59:19 in Kannada 19 ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
Isaiah 60:1 in Kannada 1 ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
Jeremiah 16:19 in Kannada 19 ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
Daniel 2:44 in Kannada 44 “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
Micah 4:1 in Kannada 1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Zechariah 8:20 in Kannada 20 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
Malachi 1:11 in Kannada 11 “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 24:31 in Kannada 31 ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
Luke 12:37 in Kannada 37 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Luke 13:28 in Kannada 28 ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
Luke 14:23 in Kannada 23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
Luke 16:22 in Kannada 22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
Acts 10:45 in Kannada 45 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,
Acts 11:18 in Kannada 18 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Acts 14:22 in Kannada 22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
Acts 14:27 in Kannada 27 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
Romans 15:9 in Kannada 9 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
1 Corinthians 6:9 in Kannada 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
1 Corinthians 15:20 in Kannada 20 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
Galatians 3:28 in Kannada 28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
Ephesians 2:11 in Kannada 11 ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
Ephesians 3:6 in Kannada 6 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
Colossians 3:11 in Kannada 11 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
2 Thessalonians 1:5 in Kannada 5 ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
Revelation 3:20 in Kannada 20 ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
Revelation 7:6 in Kannada 6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,