Matthew 9:13 in Kannada 13 ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
Other Translations King James Version (KJV) But go ye and learn what that meaneth, I will have mercy, and not sacrifice: for I am not come to call the righteous, but sinners to repentance.
American Standard Version (ASV) But go ye and learn what `this' meaneth, I desire mercy, and not sacrifice, for I came not to call the righteous, but sinners.
Bible in Basic English (BBE) But go and take to heart the sense of these words, My desire is for mercy, not offerings: for I have come not to get the upright, but sinners.
Darby English Bible (DBY) But go and learn what [that] is -- I will have mercy and not sacrifice; for I have not come to call righteous [men] but sinners.
World English Bible (WEB) But you go and learn what this means: 'I desire mercy, and not sacrifice,' for I came not to call the righteous, but sinners to repentance."
Young's Literal Translation (YLT) but having gone, learn ye what is, Kindness I will, and not sacrifice, for I did not come to call righteous men, but sinners, to reformation.'
Cross Reference Proverbs 21:3 in Kannada 3 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
Isaiah 55:6 in Kannada 6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
Hosea 6:6 in Kannada 6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.
Micah 6:6 in Kannada 6 ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರುಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
Matthew 3:2 in Kannada 2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”
Matthew 3:8 in Kannada 8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
Matthew 4:17 in Kannada 17 ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
Matthew 11:20 in Kannada 20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
Matthew 12:3 in Kannada 3 ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
Matthew 12:5 in Kannada 5 ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
Matthew 12:7 in Kannada 7 ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
Matthew 18:10 in Kannada 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Matthew 19:4 in Kannada 4 ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
Matthew 21:28 in Kannada 28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
Matthew 21:42 in Kannada 42 ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
Matthew 22:31 in Kannada 31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
Mark 2:17 in Kannada 17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
Mark 12:26 in Kannada 26 ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
Luke 5:32 in Kannada 32 ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಪಶ್ಚಾತ್ತಾಪಕ್ಕೆ ಕರೆಯುವುದಕ್ಕೆ ನಾನು ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
Luke 10:26 in Kannada 26 ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
Luke 15:3 in Kannada 3 ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
Luke 19:10 in Kannada 10 ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
Luke 24:47 in Kannada 47 ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
John 10:34 in Kannada 34 ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?
Acts 2:38 in Kannada 38 ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
Acts 3:19 in Kannada 19 ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
Acts 5:31 in Kannada 31 ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
Acts 11:18 in Kannada 18 ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Acts 17:30 in Kannada 30 ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
Acts 20:21 in Kannada 21 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
Acts 26:18 in Kannada 18 ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
Romans 2:4 in Kannada 4 ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
Romans 3:10 in Kannada 10 ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
1 Corinthians 6:9 in Kannada 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
2 Timothy 2:25 in Kannada 25 ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
2 Peter 3:9 in Kannada 9 ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.