Revelation 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Revelation 21:7

ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.

Revelation 21:6

ಇದಲ್ಲದೆ ಆತನು ನನಗೆ–ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.

Revelation 21:5

ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು–ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ–ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.

Revelation 21:4

ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

Revelation 21:3

ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ

Revelation 21:2

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

Revelation 21:1

ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.

Revelation 20:15

ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

Revelation 20:14

ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.